HomeKarnatakaಒಕ್ಕಲಿಗರ ಬಗ್ಗೆ ಹೇಳಿಕೆ ನೀಡಿದ ಭಗವಾನ್ ಗೆ ಶಾಕ್: ದಸರಾ ಯುವ ಕವಿಗೋಷ್ಠಿಯಿಂದ ಕೊಕ್

ಒಕ್ಕಲಿಗರ ಬಗ್ಗೆ ಹೇಳಿಕೆ ನೀಡಿದ ಭಗವಾನ್ ಗೆ ಶಾಕ್: ದಸರಾ ಯುವ ಕವಿಗೋಷ್ಠಿಯಿಂದ ಕೊಕ್

ಮೈಸೂರು: ಒಕ್ಕಲಿಗರ ಬಗ್ಗೆ ಪ್ರೊ. ಕೆ.ಎಸ್. ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಅವರಿಗೆ ಕೊಕ್ ನೀಡಲಾಗಿದೆ.

ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮಣಿದು ಬದಲಾವಣೆ ಮಾಡಲಾಗಿದೆ. ನಾಳೆ ಪ್ರತಿಭಟನೆ ಮಾಡುವುದಾಗಿ ರಾಜ್ಯ ಒಕ್ಕಲಿಗರ ಪಡೆ ಎಚ್ಚರಿಕೆ ನೀಡಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಳಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದು, ಪ್ರೊ. ಭಗವಾನ್ ಬದಲಿಗೆ ಸಾಹಿತಿ ಡಾ. ಡಿ.ಕೆ. ರಾಜೇಂದ್ರ ಅವರು ದಸರಾ ಕವಿ ಗೋಷ್ಠಿ ಉದ್ಘಾಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆಗೆ ಮಣಿದು ಯುವ ಕವಿಗೋಷ್ಠಿ ಉದ್ಘಾಟನೆಗೆ ಕೆ.ಎಸ್. ಭಗವಾನ್ ಬದಲು ಡಾ. ಡಿ.ಕೆ. ರಾಜೇಂದ್ರ ಅವರಿಂದ ಉದ್ಘಾಟನೆ ಮಾಡಿಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular