HomeKarnatakaBREAKING NEWS: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಹಿನ್ನೆಲೆ; ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಅಮಿತ್ ಶಾ...

BREAKING NEWS: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಹಿನ್ನೆಲೆ; ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಅಮಿತ್ ಶಾ ಕರೆ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ.

ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಮಾಜಿ ಸಚಿವ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಲೋಕಸಭಾ ಅಖಾಡಕ್ಕೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಈಶ್ವರಪ್ಪಗೆ ಕರೆ ಮಾಡಿದ್ದು, ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಈ ಬಗ್ಗೆ ಈಶ್ವರಪ್ಪ ಆಪ್ತರ ಬಳಿ ಹೇಳಿಕೊಂಡಿದ್ದು, ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ಹೋಗುತ್ತಿದ್ದೇನೆ. ಆದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ನನ್ನ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ಸ್ಪರ್ಧೆ ಅಚಲವಾಗಿದೆ ಎಂದು ತಿಳಿಸಿದ್ದಾರೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular