HomeKarnatakaಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ; ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ; ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ಮಾಡಿದ ಆರೋಪದಲ್ಲಿ ಮಾಜಿ ಸಚಿವ, ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.

ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಕೆ.ಎಸ್.ಈಶ್ವರಪ್ಪ ಚುನಾವಣಾ ಪ್ರಚಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾಧಿಕಾರಿಗಳು ತುಂಗಾನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular