BIG NEWS: ಅಪ್ಪ-ಮಕ್ಕಳಿಂದ ಬಿಜೆಪಿಯನ್ನು ಮುಕ್ತಗೊಳಿಸುವುದು, ಪಕ್ಷದ ಶುದ್ಧೀಕರಣ; ಇದೇ ನನ್ನ ಚುನಾವಣಾ ಪ್ರಣಾಳಿಕೆ; ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಣಳಿಕೆಯಲ್ಲಿಯೂ ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ ಹಾಗೂ ಮಕ್ಕಳನ್ನು ಬಿಜೆಪಿಯಿಂದ ಮುಕ್ತಗೊಳಿಸುವುದನ್ನೇ ಘೋಷಿಸಿದ್ದಾರೆ.

ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದು, ಪಕ್ಷ ಶುದ್ಧೀಕರಣ ಸೇರಿದಂತೆ ಕೆಲವು ಅಂಶಗಳು ತನ್ನ ಚುನಾವಣಾ ಪ್ರಣಾಳಿಕೆಯೆಂದು ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read