HomeLatest NewsBREAKING: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪಗೆ ಮತ್ತೆ ಸಂಕಷ್ಟ: ತನಿಖೆ ನಡೆಸಿ ವರದಿ...

BREAKING: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪಗೆ ಮತ್ತೆ ಸಂಕಷ್ಟ: ತನಿಖೆ ನಡೆಸಿ ವರದಿ ನೀಡಲು ಕೋರ್ಟ್ ಆದೇಶ

ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಸಚಿವರಾಗಿದ್ದಾಗ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.

2016ರಲ್ಲಿ ವಕೀಲ ಬಿ. ವಿನೋದ್ ಖಾಸಗಿ ದೂರು ಸಲ್ಲಿಸಿದ್ದರು. ಈಶ್ವರಪ್ಪ ಜನ ಸಂಪನ್ಮೂಲ ಸಚಿವರಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದಡಿ ದೂರು ದಾಖಲಿಸಿದ್ದರು. ಈಶ್ವರಪ್ಪ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಜಾ ಆದೇಶ ಪ್ರಶ್ನಿಸಿ ಬಿ. ವಿನೋದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಮರು ಪರಿಗಣನೆಗೆ 2020 ರಲ್ಲಿ ಹೈಕೋರ್ಟ್ ಆದೇಶ ನೀಡಿತ್ತು. ಖಾಸಗಿ ದೂರು ಮರು ಪರಿಗಣಿಸಿ ತನಿಖೆಗೆ ಆದೇಶಿಸಲಾಗಿದೆ. 156(3)ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular