HomeLatest NewsBIG NEWS: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಜೀವ ಬೆದರಿಕೆ: Y ಭದ್ರತೆ ನೀಡುವಂತೆ ಒತ್ತಾಯ

BIG NEWS: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಜೀವ ಬೆದರಿಕೆ: Y ಭದ್ರತೆ ನೀಡುವಂತೆ ಒತ್ತಾಯ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಈಶ್ವರಪ್ಪ ದೂರು ದಾಖಲಿಸಿದ್ದಾರೆ.

ಕೆ.ಎಸ್.ಈಶ್ವರಪ್ಪ ಅವರಿಗೆ ಜನವರಿ 7ರಂದು ವಿದೇಶದಿಂದ ಕರೆಯೊಂದು ಬಂದಿದ್ದು, ಜೀವ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಈ ಹಿಂದೆ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆ ಹಾಗೂ ಎಸ್ಕಾರ್ಟ್ ವ್ಯವಸ್ಥೆ ಒದಗಿಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ ಎಸ್ಕಾರ್ಟ್ ಭದ್ರತೆಯನ್ನು ಹಿಂಪಡೆದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು, ತನಗೆ Y ಸೆಕ್ಯೂರಿಟಿ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular