BIG NEWS: ಕೆ.ಎಸ್.ಈಶ್ವರಪ್ಪ ಬಂಡಾಯ ಶಮನವಾಗಲಿದೆ; ಮನವೊಲಿಕೆಗೆ ಇನ್ನೂ ಬಹಳ ಸಮಯವಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಗನಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಈಶ್ವರಪ್ಪ ಮನವೊಲಿಕೆಗೆ ಯತ್ನಿಸಿದ್ದಾರೆ.

ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಸಮಾವೇಶದಲ್ಲಿ ಭಾಗಿಯಾಗುವಂತೆ ಈಶ್ವರಪ್ಪಗೆ ರಾಜ್ಯ ಬಿಜೆಪಿ ನಾಯಕರು ಆಹ್ವಾನ ನೀಡಿದ್ದಾರೆ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈಶ್ವರಪ್ಪ ಬಂಡಾಯ ಶಮನವಾಗಲಿದೆ ಎಂದು ಹೇಳಿದ್ದಾರೆ.

ಕೆ.ಎಸ್.ಈಶ್ವರಪ್ಪ ಮನವೊಲಿಕೆ ಮಾಡುತ್ತೇವೆ. ನಾಳೆ ಪ್ರಧಾನಿ ಮೋದಿ ಅವರ ಸಮಾವೇಶದಲ್ಲೂ ಅವರು ಭಾಗವಹಿಸಬಹುದು ಎಂದರು. ಈಶ್ವರಪ್ಪ ಮನವೊಲಿಕೆಗೆ ಇನ್ನೂ ಬಹಳ ಸಮಯವಿದೆ. ಮತದಾನಕ್ಕೆ 4೦ ದಿನ ಇದೆ. ನಾಮಿನೇಷನ್ ಗೆ 20 ದಿನ ಇದೆ. ಅಷ್ಟರಲ್ಲಿ ನಾವೆಲ್ಲರೂ ಸೇರಿ ಮನವೊಲಿಕೆ ಮಾಡುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read