ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ನಡಿ ಎಫ್ ಐ ಆರ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಇದು ಯಡಿಯೂರಪ್ಪ ವಿರುದ್ಧ ನಡೆದಿರುವ ಷಡ್ಯಂತ್ರ ಎಂದು ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಯಡಿಯೂರಪ್ಪ ಈ ಷಡ್ಯಂತ್ರದಿಂದ ಹೊರಬರುತ್ತಾರೆ. ಇದೊಂದು ಮೇಲ್ನೋಟಕ್ಕೆ ಪಿತೂರಿ ಎನ್ನುವುದು ಸಾಬೀತಾಗುತ್ತದೆ ಎಂದರು.
ದೂರು ನೀಡಿದ ಮಹಿಳೆ ಅನೇಕರ ವಿರುದ್ಧ ದೂರು ನೀಡಿದ್ದಾರೆ. ಇದೊಂದು ಷಡ್ಯಂತ್ರ ಎಂದು ಹೇಳುವ ಮೂಲಕ ಕೆ.ಎಸ್.ಈಶ್ವರಪ್ಪ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.