HomeKarnatakaBIG NEWS: ಮಗನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ

BIG NEWS: ಮಗನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ಕುತಂತ್ರದಿಂದಲೇ ತನ್ನ ಮಗ ಕಂತೇಶ್ ಗೆ ಟಿಕೆಟ್ ಕೈತಪ್ಪಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾಂತೇಶ್ ಗೆ ಟಿಕೆಟ್ ಕೊಡಿಸುವ ಬಗ್ಗೆ ಮಾತನಾಡಲು ಯಡಿಯೂರಪ್ಪನವರ ಮನೆಗೆ ಹೋದಾಗ, ಟಿಕೆಟ್ ಕೊಡಿಸುವುದು ಮಾತ್ರವಲ್ಲ ಕ್ಷೇತ್ರದ ತುಂಬಾ ನಾನೇ ಓಡಾಡಿ ಕಾಂತೇಶ್ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದರು. ಈಗ ಟಿಕೆಟ್ ಕೈತಪ್ಪಿರುವುದು ಷಡ್ಯಂತ್ರವಲ್ಲದೇ ಮತ್ತಿನ್ನೇನು? ಎಂದು ಪ್ರಶ್ನಿಸಿದರು.

ಕೇಂದ್ರದ ನಾಯಕರು ವಿನಾಕಾರಣ ತಂದೆ ಹಾಗೂ ಮಕ್ಕಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಅದನ್ನು ಇವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕಾಂತೇಶ್ ಗೆ ಟಿಕೆಟ್ ಕೈತಪ್ಪಲು ತಂದೆ-ಮಕ್ಕಳೇ ಕಾರಣ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular