HomeKarnatakaBIG NEWS: ಡಿ.ಕೆ.ಶಿವಕುಮಾರ್ ಮತ್ತೆ ಜೈಲು ಸೇರ್ತಾರೆ; ಕೆ.ಎಸ್.ಈಶ್ವರಪ್ಪ ಭವಿಷ್ಯ

BIG NEWS: ಡಿ.ಕೆ.ಶಿವಕುಮಾರ್ ಮತ್ತೆ ಜೈಲು ಸೇರ್ತಾರೆ; ಕೆ.ಎಸ್.ಈಶ್ವರಪ್ಪ ಭವಿಷ್ಯ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಇಬ್ಬರೂ ಗೂಂಡಾಗಳು ಎಂಬುದು ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಸಿನಿಮಾ ಸ್ಟೈಲ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್ ಮೆಂಟ್ ಆಗಿದೆ. ಅರ್ಧ ಸೆಟಲ್ ಮೆಂಟ್ ಮೇಲೆ ಅವರಿಗೆ ಬೇಲ್ ಸಿಕ್ಕಿದೆ. ಉಳಿದ ಅರ್ಧವೂ ಜೈಲಿನಲ್ಲಿಯೇ ಸೆಟಲ್ ಮೆಂಟ್ ಆಗಿದೆ. ನೋಡ್ತಿರಿ ಇಷ್ಟರಲ್ಲೇ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗುತ್ತಾರೆ ಎಂದಿದ್ದಾರೆ.

ಇನ್ನು ಕೆ.ಎಸ್.ಈಶ್ವರಪ್ಪ ಹೇಳಿಕೆ ಸರಿಯಿಲ್ಲ. ಅವರಿಗೆ ಸೆಟಲ್ ಮೆಂಟ್ ಮಾಡ್ತೀವಿ ಎಂದು ಡಿಕೆಶಿ ಹೇಳಿದ್ದಾರೆ. ನನಗೇನು ಗ್ರಹಾಚಾರಾನಾ? ಇಂತಹ ಗೂಂಡಾಗಳನ್ನು ನಾನು ಬಹಳ ನೋಡಿದ್ದೀನಿ ಎಂದು ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular