HomeKarnatakaರಾಜಕೀಯ ಪಕ್ಷಗಳು ಜಾತಿಗಳ ಹೆಸರಲ್ಲಿ ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿವೆ; ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ರಾಜಕೀಯ ಪಕ್ಷಗಳು ಜಾತಿಗಳ ಹೆಸರಲ್ಲಿ ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿವೆ; ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಬಿಜೆಪಿಯ ಶುದ್ಧೀಕರಣವಾಗಬೇಕು ಎಂದು ಬಯಸಿರುವ, ಹಿಂದೂತ್ವದಲ್ಲಿ ನಂಬಿಕೆಯಿರುವ ಎಲ್ಲರೂ ನನ್ನ ಪರ ಮತ ಹಾಕಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ನಾನು ನಿಶ್ಚಿತವಾಗಿಯೂ ಗೆಲ್ಲುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಮುಸ್ಲಿಂ ಮತದಾರರು ಜಾಗೃತಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂದರು.

ರಾಜಕೀಯ ಪಕ್ಷಗಳು ಜಾತಿ ಹೆಸರಲ್ಲಿ ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿವೆ. ಅದಕ್ಕೆ ತದ್ವಿರುದ್ಧವಾಗಿ ಮುಸ್ಲಿಂರು ಐಕ್ಯತೆ ಪ್ರದರ್ಶಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈರಾಘವೇಂದ್ರ ಜಾತಿ ಹೆಸರಲ್ಲಿ ಮತಯಾಚಿಸಿದ್ದಾರೆ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ನನ್ನ ವಿರುದ್ಧ ಬಿ.ವೈ.ರಾಘವೇಂದ್ರ ಷಡ್ಯಂತ್ರ ನಡೆಸಿದ ಹೊರತಾಗಿಯೂ ನಾನು ಉತ್ತಮ ಲೀಡ್ ನಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular