HomeKarnatakaಕೆ.ಎಸ್. ಈಶ್ವರಪ್ಪ ವಿರುದ್ದ ಎಫ್‌ಐಆರ್

ಕೆ.ಎಸ್. ಈಶ್ವರಪ್ಪ ವಿರುದ್ದ ಎಫ್‌ಐಆರ್

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್. ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ.

ಏ. 5ರಂದು ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅಲ್ಲಿ ಅವರ ಮನೆಯ ಅಂಗಳದಲ್ಲಿ ಸುಮಾರು 50 ರಿಂದ 60 ಜನರನ್ನು ಸೇರಿಸಿಕೊಂಡು 50 ಕುರ್ಚಿಗಳು ಹಾಗೂ ಹ್ಯಾಂಡ್‌ ಮೈಕ್‌ ಒಳಗೊಂಡಂತೆ ಸಣ್ಣ ವೇದಿಕೆ ರೀತಿಯಲ್ಲಿ ಸಭೆ ನಡೆಸಿ ಅವರು ರಾಜಕೀಯ ಪ್ರೇರಿತ ಭಾಷಣವನ್ನು ಮಾಡಿರುತ್ತಾರೆ.

ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿಯನ್ನು ಈ ಕಾ‍ರ್ಯಕ್ರಮ ನಡೆಸಲು ಪಡೆದಿರುವುದಿಲ್ಲ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಸಂಜ್ಞೆಯ ಅಪರಾದ ಪ್ರಕರಣವಾದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಕೆ.ಎಸ್‌. ಈಶ್ವರಪ್ಪ ರವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular