HomeKarnatakaBIG NEWS: ಕಾಂಗ್ರೆಸ್ ನಿರ್ನಾಮ ಮಾಡಲು BJP-JDS ಮೈತ್ರಿ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

BIG NEWS: ಕಾಂಗ್ರೆಸ್ ನಿರ್ನಾಮ ಮಾಡಲು BJP-JDS ಮೈತ್ರಿ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ನ್ನು ನಿರ್ನಾಮ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಬೇಡ ಎಂದು ಇಡೀ ದೇಶದ ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಸುವ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆ ಎಂದರೆ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲ, ಇದು ದೇಶವನ್ನು ಉಳಿಸುವ ಚುನಾವಣೆ. ದೇಶವನ್ನು ಉಳಿಸಲು ಈಬಾರಿ ಬಿಜೆಪಿ-ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಲೋಕಾಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಒಂದೇ ಒಂದು ಸ್ಥಾನದಲ್ಲಿಯೂ ಕಾಂಗ್ರೆಸ್ ಗೆಲ್ಲುವುದಿಲ್ಲ. ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular