HomeKarnatakaBIG NEWS: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಕೆ.ಎಸ್.ಈಶ್ವರಪ್ಪ ಆಗ್ರಹ

BIG NEWS: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಕೆ.ಎಸ್.ಈಶ್ವರಪ್ಪ ಆಗ್ರಹ

ರಾಯಚೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಹೆಸರು ಬರೆದಿಟ್ಟು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಕಾಂಗ್ರೆಸ್ ನಾಯಕರು ನನ್ನ ರಾಜೀನಾಮೆಗೆ ಪಟ್ಟು ಹಿಡಿದಿಲ್ಲ. ನಾನೇ ಪ್ರಧಾನಿ ಮೋದಿ, ಅಮಿತ್ ಶಾಗೆ ಹೇಳಿ ರಾಜೀನಾಮೆ ಕೊಟ್ಟೆ. ತನಿಖೆ ಬಳಿಕ ನಿರ್ದೋಷಿ ಅಂತ ತೀರ್ಮಾನ ಆಯ್ತು. ನಾನು ಸಚಿವ ಶರಣಪ್ರಕಾಶ್ ಪಾಟೀಲ್ ದೋಷಿ ಅಂತ ಹೇಳಲ್ಲ. ಆದರೆ ಅವರ ಹೆಸರು ಬರೆದಿಟ್ಟು ಸತ್ತಿರುವುದರಿಂದ ರಾಜೀನಾಮೆ ಕೊಡಲಿ. ನಿರ್ದೋಷಿಯಾದ ಬಳಿಕ ಮಂತ್ರಿ ಆಗಲಿ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular