HomeKarnatakaBIG NEWS: ಡಿ.ಕೆ.ಶಿವಕುಮರ್ ಮತ್ತೆ ಜೈಲಿಗೆ ಹೋಗುತ್ತಾರೆ ಬರೆದಿಟ್ಟುಕೊಳ್ಳಿ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ

BIG NEWS: ಡಿ.ಕೆ.ಶಿವಕುಮರ್ ಮತ್ತೆ ಜೈಲಿಗೆ ಹೋಗುತ್ತಾರೆ ಬರೆದಿಟ್ಟುಕೊಳ್ಳಿ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಡಿಕೆಶಿ ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದೆ. ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಮತ್ತೆ ಜೈಲಿಗೆ ಹೋಗಲಿದ್ದಾರೆ ಬರೆದಿಟ್ಟುಕೊಳ್ಳಿ ಎಂದು ಭವಿಷ್ಯ ನುಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ಭಂಡತನದ ರಾಜಕಾರಣ ಮಾಡುತ್ತಿದ್ದಾರೆ. ಮೊನ್ನೆ ಬೆಂಗಳೂರಿನಲ್ಲಿ 100 ಕೋಟಿ ಅಕ್ರಮ ಹಣ ಪತ್ತೆಯಾಗಿದೆ. ಡಿ.ಕೆ.ಶಿ ಉತ್ತರದಲ್ಲೂ ಗೂಂಡಾಗಿರಿ ಕಂಡುಬರುತ್ತಿದೆ. ತನಿಖೆ ಮಾಡಿ ಎಂದು ಬಿಜೆಪಿ ಕೇಳೋದು ತಪ್ಪಾ? ನೀವು ಕಳ್ಳರು ಅಂತಾ ನಾವು ಇನ್ನೂ ನೇರವಾಗಿ ಹೇಳಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular