HomeKarnatakaBIG NEWS: ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ತಿರುಗೇಟು

BIG NEWS: ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ತಿರುಗೇಟು

ಬೆಂಗಳೂರು: ಪಕ್ಷಕ್ಕೆ ಬರುವಾಗ ಬಿಜೆಪಿಯವರು ಜಾಮೂನು ಕೊಡ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡ್ತಾರೆ. ಸೋಮಶೇಖರ್ ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ ಎಂದು ಅವರೇ ಮಾತನಡುತ್ತಿದ್ದಾರೆ ಎಂಬ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸೋಮಶೇಖರ್ ಪಕ್ಷ ಬಿಟ್ಟು ಹೋಗಲಿ ಎಂದು ನಾನು ಹೇಳಿಲ್ಲ. ಹಾಗೇ ಹೇಳಲು ನಾನ್ಯಾರು? ಆದರೆ ಅನೇಕರು ಬಿಜೆಪಿಯಲ್ಲಿ ಜಾಮೂನು ತಿಂದಿದ್ದಾರೆ. ವಿಷ ಕುಡಿದವರು ಒಬ್ಬರಾದ್ರೂ ಇದ್ದಾರಾ? ಜಾಮೂನು ತಿಂದು ಮಂತ್ರಿಗಳಾದರು. ನಮ್ಮನ್ನು ಮಂತ್ರಿಗಳನ್ನಾಗಿ ಮಾಡಿದರು. ಆದರೆ ಚುನಾವಣೆಯಲ್ಲಿ ಮತ್ತೆ ಸರ್ಕಾರ ಬರಲಿಲ್ಲ. ಒಂದು ವೇಳೆ ಮತ್ತೆ ನಮ್ಮ ಸರ್ಕಾರ ಬಂದಿದ್ದರೆ ಈ ಮಾತು ಹೇಳುತ್ತಿದ್ರಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮಸೇಖರ್ ಅವರನ್ನು ಟೀಕಿಸುವುದು ನನ್ನ ಉದ್ದೇಶವಲ್ಲ. ಆದರೆ ಶಾಸಕರಾಗಿ ನಮ್ಮ ಪಕ್ಷದಲ್ಲಿಯೇ ಇದ್ದು ನಮ್ಮ ಪಕ್ಷದ ವಿರುದ್ಧವಾಗಿ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular