ನ. 24 ರಂದು ಕೆ-ಸೆಟ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ಪ್ರವೇಶ ಪತ್ರ ಡೌನ್ ಲೋಡ್ ಗೆ ಲಿಂಕ್ ಬಿಡುಗಡೆ

ಬೆಂಗಳೂರು: ಕೆ-ಸೆಟ್ ಪರೀಕ್ಷೆ ಮತ್ತು ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ನ.24ರಂದು ನಡೆಯಲಿದೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(kEA) ವೆಬ್ ಸೈಟ್ ನಲ್ಲಿ ಲಿಂಕ್ ಬಿಡಲಾಗಿದೆ. ಕೆ-ಸೆಟ್ ಪರೀಕ್ಷೆಯನ್ನು 1.05 ಲಕ್ಷ ಮಂದಿ, ರಾಯಚೂರು ವಿವಿ ಪರೀಕ್ಷೆಯನ್ನು 2,000 ಮಂದಿ ತೆಗೆದುಕೊಂಡಿದ್ದಾರೆ.

ಕೆ-ಸೆಟ್ ಪರೀಕ್ಷೆ ಮತ್ತು ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಪ್ರವೇಶ ಪತ್ರಗಳನ್ನು http://kea.kar.nic.in ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read