ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಕೆ-ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜ. 13 ರಂದು ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆ- ಸೆಟ್) ಮುಂದೂಡಲಾಗಿದೆ.

ಡಿಸೆಂಬರ್ 31ರ ಬದಲು ಜನವರಿ 13ರಂದು ಪರೀಕ್ಷೆ ನಡೆಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕೆ-ಸೆಟ್ ಪರೀಕ್ಷೆ ಮುಂದೂಡಿದ್ದು, ಜನವರಿ 13ರಂದು ನಡೆಸುವುದಾಗಿ ತಿಳಿಸಿದೆ.

ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು.

ಧಾರವಾಡ ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾವೇರಿ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗಿದೆ.

ಮೈಸೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮಂಡ್ಯ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಸೇರ್ಪಡೆ ಮಾಡಲಾಗಿದೆ.

ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read