HomeKarnatakaಕೆ- ಸೆಟ್: ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕೆ- ಸೆಟ್: ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ(KSET-25) ಅರ್ಹರಾದ ಪರಿಶಿಷ್ಟ ಜಾತಿಯ SC-A, SC- B, SC-C ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಸಾಕಷ್ಟು ಅವಕಾಶಗಳು ಬಳಿಕವೂ ಮೂಲ ದಾಖಲೆಗಳ ಪರಿಶೀಲನೆ ವೇಳೆ ಒಳ ಮೀಸಲಾತಿಗೆ ಸಂಬಂಧಿಸಿದ ಜಾತಿ ಪ್ರಮಾಣ ಪತ್ರಗಳನ್ನು ಸಲ್ಲಿಸದ ಮತ್ತು ಒಳ ಮೀಸಲು ತಪ್ಪಾಗಿ ನಮೂದಿಸಿರುವ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯಿಂದ ಕೈ ಬಿಟ್ಟಿದ್ದು, ಲಭ್ಯ ಖಾಲಿ ಸ್ಥಾನಗಳಿಗೆ ಯುಜಿಸಿ ನಿಯಮಾನುಸಾರ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ ಹೊಸ ಪಟ್ಟಿ ಪ್ರಕಟಿಸಲಾಗಿದೆ.

ಅರ್ಹತಾ ಪಟ್ಟಿಯಿಂದ ಕೈ ಬಿಡಲಾದ ವಿಷಯವಾರು ಮತ್ತು ಪ್ರವರ್ಗವಾರು ಪಟ್ಟಿಯನ್ನು ಅನುಬಂಧ 1 ಮತ್ತು ಅನುಬಂಧ 2ರಲ್ಲಿ ಪ್ರಕಟಿಸಲಾಗಿದೆ. ಹೊಸದಾಗಿ ಅರ್ಹರಾಗುವ ವಿಷಯವಾರು ಮತ್ತು ಪ್ರವರ್ಗವಾರು ಅಭ್ಯರ್ಥಿಗಳ ಪಟ್ಟಿಯನ್ನು ಅನುಬಂಧ 3ರಲ್ಲಿ ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿಯ SC-A, SC- B, SC-C ಒಳ ಮೀಸಲು ಅರ್ಹ ಅಭ್ಯರ್ಥಿಗಳನ್ನು ಹೊರತುಪಡಿಸಿ ನವೆಂಬರ್ 21ರಂದು ಪ್ರಕಟಿಸಲಾದ ವಿಷಯವಾರು, ಪ್ರವರ್ಗವಾರು ಅರ್ಹತಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು.

20260318180354_mergedkannada.pdf https://share.google/ntPtsMYrwMlLwgkSJ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular