HomeLatest Newsಕೆ- ಸೆಟ್ ಪಾಸಾದ ಜಿಬಿಎ ತ್ಯಾಜ್ಯ ವಿಲೇವಾರಿ ಘಟಕದ ಮಾರ್ಷಲ್

ಕೆ- ಸೆಟ್ ಪಾಸಾದ ಜಿಬಿಎ ತ್ಯಾಜ್ಯ ವಿಲೇವಾರಿ ಘಟಕದ ಮಾರ್ಷಲ್

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ನಡೆಸಿದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)ಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಮಾರ್ಷಲ್ ಅರ್ಹತೆ ಪಡೆದುಕೊಂಡಿದ್ದಾರೆ.

ಪ್ರಾಧಿಕಾರದ ಕಚೇರಿಯ ನವೀಕೃತ ಸಭಾಂಗಣದಲ್ಲಿ ಕೆ- ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರ ದಾಖಲೆಗಳ ಪರಿಶೀಲನೆ ಕಾರ್ಯ ನಡೆಸಲಾಗಿದೆ. ಪ್ರಸನ್ನ ಸಾಂಕೇತಿಕವಾಗಿ ಕೆಲವು ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಾರ್ಷಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಅರವಿಂದ್ ಅವರು ತ್ಯಾಜ್ಯ ವಿಲೇವಾರಿ ಘಟಕದ ಬಳಿ ಸಮಯ ಸಿಕ್ಕಾಗ ಓದುತ್ತಿದ್ದರು. ಅವರು ಕೆ ಸೆಟ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.

ಬೆಂಗಳೂರು ಮಹಾನಗರದ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಘಟಕದಲ್ಲಿ ಮಾರ್ಷಲ್ ಆಗಿ ಕೆಲಸ ಮಾಡುತ್ತಿರುವ ಕೆ.ಬಿ.ಅರವಿಂದ ಎಂಬುವರು ಈ ಬಾರಿಯ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವುದು ಸಂತಸದ ವಿಷಯ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಇವರು ಕೆಲಸ‌ ಮಾಡಿಕೊಳ್ಳುತ್ತಲೇ ಸ್ನಾತಕೋತ್ತರ ಪದವಿ‌ ಮಾಡಿ ಈಗ ಕನ್ನಡ ವಿಷಯದ ಕೆಸೆಟ್ ಪರೀಕ್ಷೆಯಲ್ಲೂ ಅರ್ಹತೆ ಪಡೆದಿದ್ದಾರೆ.

ನಿತ್ಯ ತ್ಯಾಜ್ಯ ಸಂಸ್ಕರಣೆ ಘಟಕದಲ್ಲಿ ಕೆಲಸ ಮಾಡುವ ನನಗೆ ಸಹಾಯಕ ಪ್ರಾಧ್ಯಾಪಕರಾಗಬೇಕು ಎನ್ನುವ ಕನಸು ಇತ್ತು. ಆದರೆ ಅದು ಸಾಕಾರಗೊಳ್ಳಲು #KEA ನೆರವಾಗಿದ್ದು ಖುಷಿಯ ವಿಚಾರ. ನಮ್ಮಂತಹವರೂ ಇಂತಹ ಕ್ಲಿಷ್ಟ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇವತ್ತು ಪ್ರಮಾಣ ಪತ್ರ ಸ್ವೀಕರಿಸುತ್ತಿದ್ದೀನಿ ಅಂದ್ರೆ ಅದಕ್ಕೆ ಕೆಇಎ ಅಳವಡಿಸಿಕೊಂಡಿರುವ ಉತ್ಕೃಷ್ಟತೆ ಮಾನದಂಡಗಳೇ ಕಾರಣ ಎಂದು‌ ಮೆಚ್ವುಗೆ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular