ರಾಜ್ಯದ ಜನತೆಗೆ ಗುಡ್ ನ್ಯೂಸ್: ಮೂರು ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡ್

ಬೆಂಗಳೂರು: ಮುಂದಿನ ಮೂರು ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕೆ. ಹರೀಶ್ ಕುಮಾರ್, ಯು.ಬಿ. ವೆಂಕಟೇಶ್ ಅವರು ಪ್ರತ್ಯೇಕವಾಗಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 39.48 ಕೋಟಿ ಜನರಿಗೆ ಚಿಕಿತ್ಸೆ ನೀಡಲಾಗಿದೆ. 3000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತುರ್ತು ಸಂದರ್ಭದಲ್ಲಿ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಯಾವುದೇ ದಾಖಲೆ ಇಲ್ಲದೆ ಇದ್ದರೂ ಚಿಕಿತ್ಸೆ ನೀಡಬೇಕು. ಈ ಸಂಬಂಧ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರೆ ಸಿಬ್ಬಂದಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆಯಲ್ಲಿ ತಿಳಿಸಲಾಗಿದೆ. ವೈದ್ಯರ ಶಿಫಾರಸು ಪತ್ರದೊಂದಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿದ್ದು, ಈ ವ್ಯವಸ್ಥೆ ರದ್ದು ಮಾಡಲು ಸಾಧ್ಯವಿಲ್ಲ. ಶಿಫಾರಸು ಪತ್ರ ಇಲ್ಲದೆ ಚಿಕಿತ್ಸೆ ನೀಡಲು ಮುಂದಾದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಯಾರೂ ಬರಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read