HomeKarnatakaಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 4.8 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಎಸ್‌ಎಸ್‌ಟಿ ಅಧಿಕಾರಿ ದಶರಥ ವಿ. ಕುಮಾರ್ ಅವರು ಚುನಾವಣೆ ಆಕ್ರಮದ ಬಗ್ಗೆ ದೂರು ನೀಡಿದ್ದರು. ಆರಂಭದಲ್ಲಿ ಗಂಭೀರವಲ್ಲದ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಎಫ್ಐಆರ್ ದಾಖಲಿಸಿ ಕೊಂಡು ತನಿಖೆ ನಡೆಸಲು ನಿರ್ದೇಶನ ನೀಡಿದೆ.

ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಸುಧಾಕರ್ ಅವರ ಆಪ್ತ ಮಾದಾವರದ ಗೋವಿಂದಪ್ಪ ಅವರ ಮನೆಯಲ್ಲಿ ಸಂಗ್ರಹಿಸಿದ್ದ 4.8 ಕೋಟಿ ರೂ.ಗಳನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಹಣ ವಾಪಸ್ ಕೊಡಿಸುವಂತೆ ಸುಧಾಕರ್ ಅವರು ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದರು ಎಂದು ಕೇಸು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಮಾದರಿ ನೀತಿ ಸಂಹಿತೆ ಅಧಿಕಾರಿ ಮುನೀಶ್ ಮೌದ್ಗೀಲ್ ಮತ್ತು ಐಟಿ ಅಧಿಕಾರಿ ಆನಂದ್ ರಟ್ಕಲ್ ಅವರಿಗೆ ಸುಧಾಕರ್ ಕರೆ ಮಾಡಿ ಸಂದೇಶ ಕಳಿಸಿ, ಕರೆ ಮಾಡಿ, ಮಾದಾವರ ಗೋವಿಂದಪ್ಪ ಮನೆಯಲ್ಲಿ ಐಟಿ ಟೀಂ ಇದೆ. ದಯವಿಟ್ಟು ಸಹಾಯ ಮಾಡಿ, ನಿಮಗೆ ಚಿರಋಣಿ ಎಂದು ಹೇಳಿದ್ದರೆನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular