HomeIndiaಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಮಹತ್ವದ ಜವಾಬ್ದಾರಿ: ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿ

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಮಹತ್ವದ ಜವಾಬ್ದಾರಿ: ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿ

ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರನ್ನು ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ತೆಲುಗು ಭಾಷೆಯ ಮೇಲೆ ಹಿಡಿತ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರಭಾವ ಹೊಂದಿರುವ ಸುಧಾಕರ್ ಅವರಿಗೆ ಈ ಹಿಂದೆ ಕೂಡ ಬಿಜೆಪಿ ವರಿಷ್ಠರು ಹೈದರಾಬಾದ್ ಮಹಾನಗರ ಪಾಲಿಕೆ ಮತ್ತು ತೆರಂಗಾಣ ವಿಧಾನಸಭೆ ಚುನಾವಣೆಗಳಲ್ಲಿ ಜವಾಬ್ದಾರಿ ನೀಡಿದ್ದರು.

ಈಗ ಆಂಧ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ, ಮಾಜಿ ಮುಖ್ಯಮಂತ್ರಿ ಎನ್‌ಟಿಆರ್ ಪುತ್ರಿ ಪುರಂದರೇಶ್ವರಿ ಸ್ಪರ್ಧಿಸುತ್ತಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular