BIG NEWS : ಇಂದು ರಾಜ್ಯಾದ್ಯಂತ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಸೆಪ್ಟೆಂಬರ್ 03 ರಂದು ಇಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

* ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ತಪ್ಪದೇ ಈ ನಿಯಮಗಳ ಪಾಲಿಸುವುದು ಕಡ್ಡಾಯವಾಗಿದೆ.

ಸೆ.03 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12.00 ಗಂಟೆಯವರೆಗೆ ಎರಡನೇ ಅಧಿವೇಶನ ಮಧ್ಯಾಹ್ನ 2.00 ರಿಂದ 4.30 ರವರೆಗೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ಯಾವುದೇ ವಿನಾಯಿತಿ ಇರುವುದಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗ್ರತಾ ದಳದ ಅಧಿಕಾರಿಗಳನ್ನು ಮತ್ತು ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಪ್ರತಿ ಬೆಂಚ್ಗೆ ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ.

ವಿಕಲಚೇತನ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಂಗವಿಕಲತೆಯ ಪ್ರಮಾಣ ಪತ್ರವನ್ನಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ ಇಪ್ಪತ್ತು ನಿಮಿಷಗಳಂತೆ 50 ನಿಮಿಷ ಹೆಚ್ಚಿನ ಕಾಲಾವಕಾಶ ನೀಡಿದೆ. ಆನ್ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಹಾಯಕ ಬರಹಗಾರರನ್ನು ಕೋರಿರುವರು ಒಂದು(01) ದಿನ ಮುಂಚಿತವಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರವನ್ನು ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೂರ್ವ ಮುದ್ರಿತ ಓಎಂಆರ್ ನಲ್ಲಿ ಒಮ್ಮೆ ಬರೆದಿರುವುದನ್ನು ಪುನ: ಬದಲಾಯಿಸುವುದು , ತಿದ್ದುವುದು , ಬಿಳಿ ಪ್ಲ್ಯೂಯಿಡ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಬಿಳಿ ಪ್ಲ್ಯೂಯಿಡ್ ಹಚ್ಚಿ ಉತ್ತರ ಬದಲಾಯಿಸಲು ಅವಕಾಶವಿಲ್ಲ. ಇಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸುವುದಿಲ್ಲ. ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್ಗಳು, ಲಾಗ್ ಟೇಬಲ್ಗಳು, ವೈಟ್ಫ್ಲೂಯಿಡ್ಗಳು, ಬ್ಲೇಡು, ಇಂಕ್ ಎರೇಸರ್, ಬಿಳಿ ಫ್ಲೂಯಿಡ್, ಬೆಂಕಿ ಪೊಟ್ಟಣ, ಸಿಗರೆಟ್ ಲೈಟರ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read