HomeKarnatakaಕಾಂಗ್ರೆಸ್ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಕಾಂಗ್ರೆಸ್ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ 5 ಬಾರಿ ಶಾಸಕರಾಗಿದ್ದ ವಸಂತ ಬಂಗೇರ(79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ..

1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿರುವ ಅವರ ಪಾರ್ಥಿವ ಶರೀರವನ್ನು ಮೇ 9ರಂದು ಬೆಳಿಗ್ಗೆ ಬೆಳ್ತಂಗಡಿಗೆ ತರಲಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ಚುನಾವಣೆಗೆ ಸ್ಪರ್ಧಿಸಿ ಬಂಗೆರ ದಾಖಲೆ ಬರೆದಿದ್ದರು. 1983, 1985ರಲ್ಲಿ ಬಿಜೆಪಿಯಿಂದ ಶಾಸಕರಾಗಿದ್ದರು. 1989ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. 1994 ರಲ್ಲಿ ಜನತಾದಳ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. 2008, 2013 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular