HomeKarnatakaಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಪಶು ಸಂಗೋಪನಾ ಇಲಾಖೆಯಲ್ಲಿ 10,000 ಹುದ್ದೆಗಳ ಭರ್ತಿ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಪಶು ಸಂಗೋಪನಾ ಇಲಾಖೆಯಲ್ಲಿ 10,000 ಹುದ್ದೆಗಳ ಭರ್ತಿ

ಹಾಸನ: ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಹಂತ ಹಂತವಾಗಿ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ಇಲಾಖೆಗೆ ಡಿ ದರ್ಜೆ ನೌಕರರಿಂದ ಹಿಡಿದು ಅಧಿಕಾರಿಗಳವರೆಗೆ 19,000 ಸಿಬ್ಬಂದಿ ಬೇಕಿದೆ. ಪ್ರಸ್ತುತ 9000 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಂತ ಹಂತವಾಗಿ 10 ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು. 250 ಪಶು ಇನ್ಸ್ಪೆಕ್ಟರ್ ಗಳ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಅವರಿಗೆ ಆದೇಶ ಪ್ರತಿ ನೀಡಬೇಕಿದೆ. 400 ಪಶು ವೈದ್ಯರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದ್ದು, ಕೆ.ಪಿ.ಎಸ್.ಸಿ.ಗೆ ನೇಮಕಾತಿ ಹೊಣೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular