ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಚಿತ್ರರಂಗದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ದಿನಗಳಲ್ಲಿ 75 ಕೋಟಿ ರೂ. ಕ್ಲಬ್ ಸೇರಿದ ಮೊದಲ ನಾನ್ ಪ್ಯಾನ್ ಇಂಡಿಯಾ ಸಿನಿಮಾ ‘ಕಾಟೇರ’.
ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆದುಕೊಂಡ ‘ಕಾಟೇರ’ ಬಾಕ್ಸ್ ಆಫೀಸ್ ಕಲೆಕ್ಷನ್ ಗಳನ್ನೆಲ್ಲಾ ಧೂಳಿಪಟ ಮಾಡುತ್ತಿದೆ. ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಯಶಸ್ಸಿಗೆ ಕಾರಣರಾದ ಅಭಿಮಾನಿಗಳು, ಸಿನಿರಸಿಕರಿಗೆ ಚಿತ್ರತಂಡ ಕೃತಜ್ಞತೆ ಸಲ್ಲಿಸಿದೆ.
ಮೊದಲ ದಿನವೇ 20 ಕೋಟಿ ರೂ. ಕಲೆಕ್ಷನ್ ಮಾಡಿದ್ದ ‘ಕಾಟೇರ’ ಎರಡನೇ ದಿನ 17.13 ಕೋಟಿ ರೂ., ಮೂರನೇ ದಿನ 20 ಕೋಟಿ ರೂ., 4ನೇ ದಿನ 19 ಕೋಟಿ ರೂ. ಗಳಿಕೆ ಕಂಡಿದೆ.
ಕನ್ನಡ ಚಿತ್ರರಂಗದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ದಿನಗಳಲ್ಲಿ 75 ಕೋಟಿ ಕ್ಲಬ್ ಸೇರಿದ ಮೊದಲ ನಾನ್ ಪ್ಯಾನ್ ಇಂಡಿಯಾ ಸಿನಿಮಾ ನಮ್ಮ ಕಾಟೇರ. 🥰ನಿಮ್ಮ ಸಹಕಾರ & ಬೆಂಬಲದೊಂದಿಗೆ ಹೊಸ ದಾಖಲೆ ನಿರ್ಮಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ🔥
ಜೈ #KaateraBlockBuster #dboss #DBossFans pic.twitter.com/S1LG2utCCe— Jadeshaa k hampi (@jadeshaakhampi) January 2, 2024