ಮೈಸೂರು: ರಾಜ್ಯಾದ್ಯಂತ ಉತ್ತಮ ಮಳೆ ಹಿನೆಲೆಯಲ್ಲಿ ಜಲಾಶಯಗಳು ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.
ರಾಜ್ಯದಲ್ಲಿಯೇ ಮೊದಲು ಭರ್ತಿಯಾಗುವ ಜಲಾಶಯ ಎಂದೇ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯಕ್ಕೆ ಈ ಹಿಂದೆಯೇ ಬಾಗಿನ ಸಮರ್ಪಿಸಬೇಕಿತ್ತು. ಆದರೆ ಕಾರಣಾಂತರದಿಂದ ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು. ಇದೀಗ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಸಮರ್ಪಿಸಿದ್ದಾರೆ.