HomeLatest NewsBREAKING: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

BREAKING: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಮೈಸೂರು: ರಾಜ್ಯಾದ್ಯಂತ ಉತ್ತಮ ಮಳೆ ಹಿನೆಲೆಯಲ್ಲಿ ಜಲಾಶಯಗಳು ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದ್ದಾರೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿಯೇ ಮೊದಲು ಭರ್ತಿಯಾಗುವ ಜಲಾಶಯ ಎಂದೇ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯಕ್ಕೆ ಈ ಹಿಂದೆಯೇ ಬಾಗಿನ ಸಮರ್ಪಿಸಬೇಕಿತ್ತು. ಆದರೆ ಕಾರಣಾಂತರದಿಂದ ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು. ಇದೀಗ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಸಮರ್ಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular