ಇಂದಿನಿಂದ ಬೆಂಗಳೂರಲ್ಲಿ ‘ಕಡಲೆಕಾಯಿ ಪರಿಷೆ’ ಆರಂಭ : ಬೆಳಗ್ಗೆ 11 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

ಬೆಂಗಳೂರು : ಇಂದಿನಿಂದ ಬೆಂಗಳೂರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ.ಮಲ್ಲೇಶ್ವರಂನ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಡಿ.2 ರಿಂದ ಡಿ.4 ರವರೆಗೂ ನಡೆಯಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಿಪ ಸದಸ್ಯ ಬಿಕೆ ಹರಿಪ್ರಸಾದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಮಹೇಶ್ ಜೋಷಿ ಮತ್ತಿತರರು ಇರಲಿದ್ದಾರೆ.

ಡಿ. 3ರಂದು ಬೆಳಗ್ಗೆ 11.30ಕ್ಕೆ ಪಂಚಮ ಸಂಗೀತ ತಂಡದ ಎಲ್ ಶಿವಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ, ಸಂಜೆ ಮಧು ಮನೋಹರ್ ಮತ್ತು ಕಾರ್ತಿಕ್ ಪಾಂಡವಪುರ ತಂಡದವರಿಂದ ಡಾ. ರಾಜ್ಕುಮಾರ್ ಸವಿ ನೆನಪಿನಲ್ಲಿಮಧುರ ನೆನಪಿನ ಗಾಯನ ಕಾರ್ಯಕ್ರಮ ನಡೆಯಲಿದೆ. ಡಿ. 4ರ ಬೆಳಗ್ಗೆ 9.30ಕ್ಕೆ ಕಾಡುಮಲ್ಲಿಕಾರ್ಜುನ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read