ಮಲ್ಲೇಶ್ವರದಲ್ಲಿ ನ 15 ರಿಂದ ಕಡಲೆಕಾಯಿ ಪರಿಷೆ

ಬೆಂಗಳೂರು: ಮಲ್ಲೇಶ್ವರದ ಶ್ರೀ ಭ್ರಮರಾಂಭ ಸಮೇತ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ನವೆಂಬರ್ 15 ರಿಂದ 18ರವರೆಗೆ ಮಲ್ಲೇಶ್ವರ ಕಡಲೆಕಾಯಿ ಪರಿಷೆ, ರಾಜ್ಯೋತ್ಸವ ಸ್ವಾಭಿಮಾನ ಆಚರಣೆ ಕಾರ್ಯಕ್ರಮ ನಡೆಯಲಿದೆ.

ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ. ಶಿವರಾಂ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ನಾಲ್ಕು ದಿನಗಳ ಪರಿಷೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಿಂದ ರೈತರು ಭಾಗವಹಿಸಲಿದ್ದಾರೆ. 400ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪರಿಸರ ಸ್ನೇಹಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ಮುಕ್ತ ಬಟ್ಟೆ ಚೀಲ, ಪೇಪರ್ ಚೀಲಗಳನ್ನು ಉಚಿತವಾಗಿ ನೀಡಲಾಗುವುದು. ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ನವೆಂಬರ್ 15 ರಂದು ಸಂಜೆ ಕಡಲೆಕಾಯಿ ಪರಿಷೆ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ಡಿಸಿಎಂ ಡಿ.ಕೆ. ಶಿವಕುಮಾರ್ ಸಚಿವರಾದ ರಾಮಲಿಂಗಾರೆಡ್ಡಿ, ಶಿವರಾಜ್ ತಂಗಡಗಿ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಕಡಲೆಕಾಯಿ ಪರಿಷೆ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಸಂಜೆ ಹುಣ್ಣಿಮೆ ಹಾಡು, ಬೆಳದಿಂಗಳ ಬೆಸದ ಹುಣ್ಣಿಮೆ ಹಾಡು, ಹಂಸಲೇಖ ಅವರಿಂದ ಸಂಗೀತ ಕಾರ್ಯಕ್ರಮ, ಅಪರೂಪದ ಭಾವಗೀತೆಗಳ ಕಾರ್ಯಕ್ರಮ, ಡಾ. ರಾಜ್ ನೆನಪಿನಲ್ಲಿ ವಿಶೇಷ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರಂಗಿ ವಾದಕ, ಹಿಂದುಸ್ತಾನಿ ಗಾಯಕ ಉಸ್ತಾದ್ ಫಯಾಜ್ ಖಾನ್ ಅವರಿಂದ ಸಾರಂಗಿ ವಾದನ ಸಂಗೀತ ಕಾರ್ಯಕ್ರಮ. ಕಾಡು ಮಲ್ಲಿಕಾರ್ಜುನ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಸೇರಿ ಹಲವು ಕಾರ್ಯಕ್ರಮ ನಡೆಯಲಿವೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read