ಕಾರವಾರ: ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗ್ದೆ. ಉಗ್ರರು ಭಾರತದ ಮೇಲೆ ಮತ್ತೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗ, ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಕದಂಬ ನೌಕಾ ನೆಲೆ, ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ಮಾರ್ಗಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಅರಗಾದ ಕದಂಬ ನೌಕಾ ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಕಾವಲುಪಡೆ, ತಟರಕ್ಷಕ ದಳದಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಬಂದರಿನಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೇರೆ ದೇಶಗಳಿಂದ ಬರುವ ಸರಕು-ಸಾಗಾಟ ಹಡಗುಗಳಿಗೂ ನಿರ್ಬಂಧಿಸಲಾಗಿದೆ. ಬಂದರಿಗೆ ಬರುವ ಹಡಗು, ಬೋಟ್ ಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇದೇ ವೇಳೆ ಆಳ ಸಮುದ್ರಕೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.
12 ನಾಟಿಕಲ್ ಮೈಲ್ ದೂರದಿಂದ ಹೊರ ಹೋಗದಂತೆ ಕರಾವಳಿ ಕಾವಲು ಪಡೆ ಖಡಕ್ ಸೂಚನೆ ನೀಡಿದೆ. ಮುಂಜಾಗೃತಾ ಕ್ರಮವಾಗಿ ಕರಾವಳಿ ಭಾಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.