HomeLatest NewsBIG NEWS: ಕದಂಬ ನೌಕಾನೆಲೆಯಲ್ಲಿ INS ವಾಗ್ಶೀರ್ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

BIG NEWS: ಕದಂಬ ನೌಕಾನೆಲೆಯಲ್ಲಿ INS ವಾಗ್ಶೀರ್ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ರಾಷ್ತ್ರಪತಿ ದ್ರೌಪದಿ ಮುರ್ಮು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕದಂಬ ನೌಕಾ ನೆಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಐಎನ್ ಎಸ್ ವಾಗ್ಶೀರ್ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದರು.

ಈ ಮೂಲಕ ಡಾ.ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿಯಲ್ಲಿ ನೌಕೆಯಲ್ಲಿ ಸಂಚರಿಸಿದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಪಾತ್ರರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಳಿಗ್ಗೆ ಗೋವಾದಿಂದ ಕಾರವಾರದ ಕದಂಬ ನೌಕಾನೆಲೆಗೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಿಸಿದರು. ಬಳಿಕ ಜಲಾಂತರ್ಗಾಮಿ ನೌಕೆಯೊಳಗೆ ತೆರಳಿದರು. ಜಲಾಂತರ್ಗಾಮಿ ನೌಕೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಜಲಾಂತರ್ಗಾಮಿಯಲ್ಲಿ ರಾಷ್ಟ್ರಪತಿ ಸಂಚಾರ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular