ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕದ್ರಾ ಜಲಾಶಯ ಭರ್ತಿಯಾಗಿದೆ. ಕಡ್ರಾ ಡ್ಯಾಂ ನಿಂದ ಕಾಳಿ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡಗಡೆ ಮಾಡಲಾಗಿದೆ.
ಕೊಡಸಳ್ಳಿ ಹಾಗೂ ಕದ್ರಾ ಡ್ಯಾಂ ಗಳಿಂದ ತಲಾ 6 ಗೇಟ್ ಗಳ ಮೂಲಕ ನಿರಂತರವಾಗಿ ನದಿಗೆ ನೀರು ಬಿಡಲಾಗುತ್ತಿದೆ. ಕೊಡಸಳ್ಳಿ ಜಲಾಶಯದಿಂದ 42.430 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಕಾಳಿನದಿಯ ಕೊನೆಯ ಜಲಾಶಯವಾಗಿರುವ ಕದ್ರಾ ಡ್ಯಾಂ ನಿಂದ 51.329 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಜಲಾಶಯಗಳ ಗೇಟ್ ಮೂಲಕ 30,198 ಕ್ಯೂಸೆಕ್ ಮತ್ತು ವಿದ್ಯುತ್ ಉತ್ಪಾದನಾ ಘಟಕದಿಂದ ಹೆಚ್ಚುವರಿಯಾಗುವ 21,131 ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಮುನ್ಸೂಚನೆ ನೀಡಲಾಗಿದೆ.
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸನ್ನದ್ಧರಾಗಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.