ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪರಿಗೆ ದೇವರಾಜ ಅರಸು ಪ್ರಶಸ್ತಿ

ಬೆಂಗಳೂರು: ಮಾಜಿ ಸಚಿವ, ವಿಧಾನಸಭೆ ಮಾಜಿ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ದೇವರಾಜ ಅರಸು ಪ್ರಶಸ್ತಿಗೆ ಕಾಗೋಡು ತಿಮ್ಮಪ್ಪ ಅವರನ್ನು ಆಯ್ಕೆ ಮಾಡಿದ್ದು, ಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ಸಿಎಂ ಡಿ. ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಮತ್ತು ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ನೇತೃತ್ವದ ಆಯ್ಕೆ ಸಮಿತಿ ದೇವರಾಜ ಅರಸು ಪ್ರಶಸ್ತಿಗೆ ಕಾಗೋಡು ತಿಮ್ಮಪ್ಪನವರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ 5 ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದಾರೆ.

https://twitter.com/CMofKarnataka/status/1692224380384981192

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read