ನಾನು ವಲಸಿಗನಲ್ಲ, ಮೂಲತಃ ಕಾಂಗ್ರೆಸ್: ಖರ್ಗೆ ಭೇಟಿಯಾಗಿ ಪುತ್ರಿಗೆ ಟಿಕೆಟ್ ಕೇಳಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ಬೆಂಗಳೂರು: ಪುತ್ರಿ ರಾಜನಂದಿನಿಗೆ ಟಿಕೆಟ್ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ನಾನು ಪಕ್ಷಕ್ಕೆ ವಲಸಿಗನಲ್ಲ, ಮೂಲತಃ ಕಾಂಗ್ರೆಸ್ ಪಕ್ಷದವನು. ಪುತ್ರಿ ರಾಜನನಂದಿನಿಗೆ ಸ್ಪರ್ಧೆಗೆ ಒಂದು ಅವಕಾಶ ನೀಡುವಂತೆ ಖರ್ಗೆಯವರಿಗೆ ಮನವಿ ಮಾಡಿದ್ದೇನೆ ಎಂದರು.

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಅನೇಕ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. ಅಭ್ಯರ್ಥಿಗೆ ಟಿಕೆಟ್ ಕೊಡುವ ಮೊದಲು ಅನೇಕ ವರದಿಗಳನ್ನು ಪಡೆದು ಪರಿಶೀಲಿಸುತ್ತಾರೆ. ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ಚರ್ಚೆ ನಡೆಸಿ ಪುತ್ರಿಗೆ ಟಿಕೆಟ್ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read