ಸಾಗರ : ಇಲ್ಲಿನ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಮತ್ತು ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ.
ಸಾಗರ ಮಾರಿಕಾಂಬಾ ದೇವಿಯ ಜಾತ್ರೆಯ ಸಂಭ್ರಮದ ನಡುವೆ ದೇವಿಯ ಆಶೀರ್ವಾದ ಪಡೆಯಲು ಕಾಗೋಡು ತಿಮ್ಮಪ್ಪನವರು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಅವರನ್ನು ಸಾಗರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೂಲಗಳ ಪ್ರಕಾರ, ಕಾಗೋಡು ತಿಮ್ಮಪ್ಪನವರಿಗೆ ಮೊದಲಿನಿಂದಲೂ ಮಧುಮೇಹ (Diabetes) ಸಮಸ್ಯೆ ಇತ್ತು. ಇಂದು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.ಕಾಗೋಡು ತಿಮ್ಮಪ್ಪನವರು ಕರ್ನಾಟಕದ ಹಿರಿಯ ರಾಜಕಾರಣಿಯಾಗಿದ್ದು, ಸಭಾಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ.

