HomeKarnatakaಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ ಸಮಸ್ಯೆಗಳ ಬಗೆಹರಿಸುವ ಬಗ್ಗೆ ಇತ್ತೀಚಿಗೆ ನಡೆದ ಬೆಳವಣಿಗೆಗಳ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಆರೋಗ್ಯ ವಿಚಾರಿಸಿದ ಬಳಿಕ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಭಾನು, ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್ ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular