ಐಷಾರಾಮಿ ಜೆಟ್ ನಲ್ಲಿ ದೆಹಲಿ ಪ್ರಯಾಣ : ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಐಷಾರಾಮಿ ಜೆಟ್ ನಲ್ಲಿ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ ಮಾಡಿದ್ದಾರೆ ಎನ್ನಲಾದ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ.ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

2014ರ ಜೂನ್ 15ರಿಂದ 2023ರ ಸೆಪ್ಟೆಂಬರ್ವರೆಗೆ ಪ್ರಧಾನಿ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ.ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read