ಕಲಬುರಗಿ: ಸಾರಿಗೆ ಬಸ್ ಗೆ ಕಮಾಂಡರ್ ಜೀಪ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿಯಲ್ಲಿ ನಡೆದಿದೆ.
ನಿಂತಿದ್ದ ಸಾರಿಗೆ ಬಸ್ ಗೆ ಇನ್ನೊಂದು ಬಸ್ ಡಿಕ್ಕಿಯಾಗಿದೆ. ಇದೇ ವೇಳೆ ಕಮಾಂಡರ್ ಜೀಪ್ ಕೂಡ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.
