HomeKarnatakaBIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

BIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಸನಾಪುರ ಬಳಿ ಬೈಕ್, ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಘವೇಂದ್ರ (35), ಮುಜಾಹಿದ್ (30) ಹುಸೇನ್ ಬಿ (45) ಮೌಲಾಬಿ (50) ಮೃತ ದುರ್ದೈವಿಗಳು. ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ಲಾರಿಗೆ ಡಿಕ್ಕಿ ಹೊಡೆದು ಲಾರಿ ಚಕ್ರಕ್ಕೆ ಸಿಲುಕಿದೆ. ಈ ವೇಳೆ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಹಾಗೂ ಬೈಕ್ ಸವಾರ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular