HomeKarnatakaಕಲಬುರಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೊಬ್ಬ ಕಾರ್ಮಿಕ ಸಾವು

ಕಲಬುರಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೊಬ್ಬ ಕಾರ್ಮಿಕ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಸೇಡಂನ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಭಾನುವಾರ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ರಾಜಕುಮಾರ್(26) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ.

ಫ್ಯಾಕ್ಟರಿಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ರಾಜಕುಮಾರ್ ಸಾವು ಸಂಭವಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ್ ಸುರಕ್ಷತಾ ಕ್ರಮವಿಲ್ಲದ ಕಾರಣ ಮೃತಪಟ್ಟಿದ್ದರು. ಎರಡು ತಿಂಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಸೇಡಂನವರೇ ಸಾವನ್ನಪ್ಪಿದ್ದಾರೆ. ಹೀಗಿದ್ದರೂ ಸಚಿವರು ಭೇಟಿ ನೀಡಿಲ್ಲ. ಅಧಿಕಾರಿಗಳು ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಸುರಕ್ಷತಾ ಕ್ರಮ ಕೈಗೊಳ್ಳದ ಬಗ್ಗೆ ಫ್ಯಾಕ್ಟರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಸೇಡಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಗೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular