HomeKarnatakaBREAKING : ಕಲಬುರಗಿಯಲ್ಲಿ ಭೀಕರ ಅಪಘಾತ ; ಆಟೋಗೆ ಲಾರಿ ಡಿಕ್ಕಿಯಾಗಿ ತಾಯಿ ಮಗು ಸ್ಥಳದಲ್ಲೇ...

BREAKING : ಕಲಬುರಗಿಯಲ್ಲಿ ಭೀಕರ ಅಪಘಾತ ; ಆಟೋಗೆ ಲಾರಿ ಡಿಕ್ಕಿಯಾಗಿ ತಾಯಿ ಮಗು ಸ್ಥಳದಲ್ಲೇ ಸಾವು

ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ವಾಡಿ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಆಟೋದಲ್ಲಿದ್ದ ಶರಣಮ್ಮ (30) ಹಾಗೂ ಅವರ ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಶರಣಮ್ಮ ಅವರ ಅತ್ತೆ ಸಾಬಮ್ಮ ಹಾಗೂ ಆಟೋ ಚಾಲಕ ಖಾಜಾ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಘಟನೆ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಯಾದಗಿರಿಯಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಸಾವು

 ಯಾದಗಿರಿ: ಕಾರಿಗೆ ಏಕಾಏಕಿ ನಾಯಿ ಅಡ್ಡಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಯಾದಗಿರಿ ಜಿಲ್ಲೆಯ ಯರಗೋಳ ಸಮೀಪದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ಯುವಕರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸರ್ಜಾಪುರದ ಸಾಹಿಲ್ ಶರೀಫ್ (25) ಹಾಗೂ ಹೊಸಕೋಟೆ ತಾಲ್ಲೂಕಿನ ಮೆಡಿಮಲ್ಲಸಂದ್ರದ ಸೈಯದ್ ಯಾಸೀನ್ (23) ಮೃತಪಟ್ಟವರು.

ಅಪಘಾತದಲ್ಲಿ ಸೈಯದ್ ಆಸಿಫ್, ವಸೀಮ್ ಅಕ್ರಮಪಾಶಾ, ಅಲಿಜಾನ್‌ಪಾಶಾ, ಸಮೀರ್ ಸಾಹಿಲ್ ಹಾಗೂ ಚಾಲಕ ಅನ್ಸಾರಿ ಸಮೀರ್ ಪಾಶಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೈಯದ್ ಆಸಿಫ್ ಹಾಗೂ ಅವರ ಸ್ನೇಹಿತರು ಬೆಂಗಳೂರಿನಿಂದ ಖಾಜಾ ಬಂದಾ ನವಾಜ್ ದರ್ಗಾಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಯರಗೋಳ ಸಮೀಪದ ಬೈಪಾಸ್ ರಸ್ತೆಯಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ಏಕಾಏಕಿ ನಾಯಿ ರಸ್ತೆಗೆ ಅಡ್ಡಬಂದಿದೆ.

ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಅನ್ಸಾರಿ ಸಮೀರ್ ಪಾಶಾ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಕೆಳಕ್ಕೆ ಉರುಳಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಘಟನೆ ಸಂಬಂಧ ಅನ್ಸಾರಿ ವಿರುದ್ಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular