HomeKarnatakaSHOCKING NEWS: ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂ ಗೆ ಬೆಂಕಿಯಿಟ್ಟ ಭೂಪ

SHOCKING NEWS: ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂ ಗೆ ಬೆಂಕಿಯಿಟ್ಟ ಭೂಪ

ಕಲಬುರಗಿ: ಬೈಕ್ ಸರಿಯಾಗಿ ರಿಪೇರಿ ಮಾಡಿಕೊಟ್ಟಿಲ್ಲ ಎಂದು ವ್ಯಕ್ತಿಯೋರ್ವ ಬೈಕ್ ಶೋ ರೂಂಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮೊಹಮ್ಮದ್ ನದೀಮ್ ಎಂಬಾತ, ತನ್ನ ಎಲೆಕ್ಟ್ರಿಕ್ ಬೈಕ್ ನ್ನು ಸರಿಯಾಗಿ ರಿಪೇರಿ ಮಾಡಿಕೊಟ್ಟಿಲ್ಲ ಎಂದು ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋ ರೂಂ ಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಭಾವಿಸಲಾಗಿತ್ತು. ಆದರೆ ಪೊಲೀಸರ ತನಿಖೆ ವೇಳೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದು ಪತ್ತೆಯಾಗಿದೆ. ಮಹಮ್ಮದ್ ನದೀಮ್ ಮೊದಲು ತನ್ನ ಬೈಕ್ ಸರಿಯಾಗಿ ರಿಪೇರಿ ಮಾಡಿಕೊಟ್ಟಿಲ್ಲ ಎಂದು ಶೋ ರೂಂಗೆ ಬಂದು ಸಿಬ್ಬಂದಿಗಳ ಜೊತೆ ಜಗಳವಾಡಿದ್ದಾನೆ. ಬಳಿಕ ಪೆಟ್ರೋಲ್ ತಂದು ಸುರಿದು ಶೋ ರೂಂ ಗೆ ಬೆಂಕಿ ಹಚ್ಚಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular