ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚನ ವಿಚಾರ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.
ಚಿತ್ತಾಪುರದಲ್ಲಿ 300 ಕಾರ್ಯಕರ್ತರಿಂದ ಆರ್.ಎಸ್.ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಎಜಿ ಶಶಿಕಿರಣ ಶೆಟ್ಟಿ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಮಾಹಿತಿ ನೀಡಿದ್ದಾರೆ.
ಒಂದು ಬಾರಿಯ ಅವಕಾಶವಾಗಿ ಸರ್ಕಾರ ಪಥಸಂಚಲನಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯ;ಲ್ಲಿ ನವೆಂಬರ್ 16ರಂದು ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ನಡೆಯಲಿದೆ.
