ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್ ಪಕ್ಷ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.
ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಜ್ಮಲ್ ಗೋಲಾ ಅವರು ಆಯ್ಕೆಯಾಗಿದ್ದಾರೆ. ಇದೇ ವೇಳೆ ಫರ್ಹಜಾನ್ ಖುಸ್ರೋ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಇಂದಿನ ಚುನಾವಣೆಯ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ. ಮೇಯರ್ ಮತ್ತು ಉಪಮೇಯರ್ ಆಯ್ಕೆಯ ಬಳಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

