ಮತದಾನ ಮಾಡಿದ ಮರುಕ್ಷಣವೇ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲಬುರಗಿ: ಮತದಾನ ಮಾಡಿದ ನಂತರ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ವಲಯದ ಮಗುಣಿಕೆ ಗ್ರಾಮದ ನಿವಾಸಿ ಸಿದ್ದಪ್ಪ ಶರಣಪ್ಪ ಪಡಶೆಟ್ಟಿ(70) ಮೃತಪಟ್ಟವರು. ಮಂಗಳವಾರ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಅವರು ಹೊರಬಂದ ಮರುಕ್ಷಣವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಬಿಸಿಲಿನ ತಾಪ 46 ಡಿಗ್ರಿ ಸೆಲ್ಸಿಯಸ್ ನಷ್ಟು ಇದೆ. ಉರಿ ಬಿಸಿಲಿನ ಆಘಾತದಿಂದ ಸಿದ್ದಪ್ಪ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read