ಕಲಬುರಗಿ: ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಾಶಮ್ಕರ್ ಬಿಲಗುಂದಿ ಮನೆ ಸೇರಿದಂತೆ 7 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭೀಮಾಶಂಕರ್ ಬಿಲಗುಂದಿ, ಎಂಆರ್ ಎಂ ಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ. ಪಟೇಲ್ ಹಾಗೂ ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜಿನ ಲೆಕ್ಕ ಪರಿಶೋಧಕ ಸುಭಾಷ್ ಚಂದ್ರ ಅವರಿಗೆ ಸೇರಿದ ಸ್ಥಳಗಳು ಸೇರಿದಂತೆ ಕಲಬುರಗಿಯ 7 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
2002ರ ನಿಬಧನೆಗಳ ಅಡಿಯಲ್ಲಿ ಈ ದಾಳಿ ನಡೆದಿದೆ. ದಾಳಿ ವೇಎ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.