ಕಲಬುರಗಿ: ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಮತ್ತೆ ಕಲಬುರಗಿಯಲ್ಲಿಯೂ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬೆಳಗಾವಿ, ಬಾಗಲಕೋಟೆ ಬಳಿಕ ಇದೀಗ ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಸರ್ಕಾರ ನಿಗದಿಪಡಿಸಿರುವ 3300 ರೂಪಾಯಿ ಸಾಲದು, ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಡಿಸಿ ಕಚೇರಿ ಮುಂಭಾಗದಿಂದ ಎಸ್ ವಿಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಡಿಸಿ ಕಚೇರಿ ಬಳಿಯೇ ರಸ್ತೆಯಲ್ಲಿ ಧರಣಿ ಮುಂದುವರೆಸಿದ್ದಾರೆ.
