ಕಲಬುರಗಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
38 ವರ್ಷದ ಶ್ರೀನಾಥ್ ಹೃದಯಾಘಾತದಿಂದ ಸಾವನ್ನಪ್ಪಿದವರು. ಸೇಡಂ ಮೂಲದ ನಿವಾಸಿ ಶ್ರೀನಾಥ್, ಹೈದರಾಬಾದ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಊರಿಗೆ ಬಂದಿದ್ದ ಶ್ರೀನಾಥ್ ಅವರುಗೆ ಕಳೆದವಾರ ಲಘು ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀನಾಥ್ ಇದೀಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.